ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸೊಳ್ಳೆ ನಿಯಂತ್ರಣ ಪರಿಸರ ಕುರಿತಾದ ಮಾದರಿಯ ತಯಾರಿ ಮತ್ತು ಪ್ರದಶ೯ನ ವಿಚಾರವಾಗಿ ಏಪ೯ಡಿಸಿದ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಕುಮಾರಿ ತನ್ಮಯ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡರು. ಮಂಗಳೂರು ಹಂಪನಕಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಬಹುಮಾನವನ್ನು ಸ್ವೀಕರಿಸಿದಳು.

ರಾಷ್ಟ್ರೀಯ ಅರೋಗ್ಯ ಅಭಿಯಾನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ದಕ್ಷಿಣ ಕನ್ನಡ ಮಂಗಳೂರು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಯನ್ನು ಏರ್ಪಡಿಸಿತ್ತು. ಮಜಿ ಉಮೇಶ್ ಹಾಗೂ ರಂಜಿತ ಅವರ ಪುತ್ರಿ

ಪ್ರಶಸ್ತಿ ಪಡೆದ ವಿದ್ಯಾರ್ಥಿಯನ್ನು ಶಾಲಾ ವತಿಯಿಂದ ಶಾಲಾ ಅಸೆಂಬ್ಲಿಯಲ್ಲಿ ಅಭಿನಂದಿಸಲಾಯಿತು.