ದೇಶದ ಗ್ರಾಮೀಣ ಪ್ರದೇಶಗಳ ಬಡಜನರಿಗೆ ಅವರು ವಾಸಿಸುವ ಸ್ಥಳದಲ್ಲೇ ಉದ್ಯೋಗ ಒದಗಿಸಿ, ಅವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದುಪಡಿಸಿ, ಕೇಂದ್ರ ಸರ್ಕಾರ ನಿರ್ಧರಿಸಿದ ಸ್ಥಳಗಳಲ್ಲಿ ಮಾತ್ರ ಕೆಲಸ ನೀಡುವ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿ ಮಾಡಲಾಗಿದೆ. ಕೋಟ್ಯಂತರ ಬಡಕುಟುಂಬಗಳ ಬದುಕು‌ ಕಸಿಯುವ ಈ ವ್ಯವಸ್ಥಿತ ಸಂಚಿನ ವಿರುದ್ಧ ದನಿಯೆತ್ತಬೇಕಿರುವುದು ನಮ್ಮ – ನಿಮ್ಮ ಎಲ್ಲರ ಕರ್ತವ್ಯ ಎಂದು ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.
ಅವರು ಮನರೇಗಾ ಉಳಿಸಿ ಅಭಿಯಾನದ ಅಂಗವಾಗಿ ಇಂದು ಚಿಕ್ಕಬಳ್ಳಾಪುರದಲ್ಲಿ‌ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮನರೇಗಾದ ಅಗತ್ಯತೆಗಳ ಬಗ್ಗೆ ಮಾತನಾಡಿದರು. ಮನರೇಗಾ ಯೋಜನೆ ಮರುಜಾರಿ ಆಗುವ ವರೆಗೆ ಹೋರಾಟದಿಂದ ನಾವು ಹಿಂದೆ ಸರಿಯುವುದಿಲ್ಲ ಎಂದರು.