ಬಂಟ್ವಾಳ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಂಟ್ವಾಳ ಇದರ ಸಭೆ ಮಂಗಳವಾರ ಬಂಟ್ವಾಳದ‌ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉನ್ನತಿ ಸೌಧದಲ್ಲಿ ನಡೆಯಿತು.

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಮಧ್ಯ ವರ್ಜನ ಶಿಬಿರದ ಸಂಚಾಲಕರಾದ ಅರ್ಕ ಕೀರ್ತಿಂದ್ರ ಕಾರ್ಯಕ್ರಮ ಉದ್ಘಾಟಿಸಿದರು.

ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ರೊನಾಲ್ಡ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮ ಅಕ್ಟೋಬರ್ 6 ರಂದು ಬಂಟ್ವಾಳ ಶ್ರೀ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಸುವುದೆಂದು, ತೀರ್ಮಾನಿಸಿ, ಕಾರ್ಯಕ್ರಮದ ವ್ಯವಸ್ಥೆಯ ಜವಾಬ್ದಾರಿಯನ್ನು ಹಂಚಲಾಯಿತು.

ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್ ,ತುಂಬೆ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರೊಫೆಸರ್ ತುಕಾರಾಮ ಪೂಜಾರಿ, ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಸದಸ್ಯರುಗಳು, ವಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.

ವಗ್ಗ ವಲಯ ಮೇಲ್ವಿಚಾರಕಿ ಸವಿತಾ ಸ್ವಾಗತಿಸಿ, ಪೊಳಲಿ ವಲಯ ಮೇಲ್ವಿಚಾರಕಿ ಹರಿಣಾಕ್ಷಿ ಹಿಂದಿನ ಸಭೆಯ ವರದಿ ವಾಚಿಸಿ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕ್ರಷ್ಣ ಎಂ.ವಂದಿಸಿ, ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು.