ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಕ್ಕೆ ಜೂ. 3 ರಂದು ನಡೆಯಲಿರುವ ಚುನಾವಣೆಯ ಪ್ರಯುಕ್ತ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪ್ರಮುಖರ ಸಭೆ ರಾಯಿ ಪೇಟೆಯಲ್ಲಿ ನಡೆಯಿತು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ಡೊಂಬಯ ಅರಳ ಮತ್ತು ಕಾವಳಪಡೂರು ಮಹಾಶಕ್ತಿ ಕೇಂದ್ರದ ಚುನಾವಣಾ ಸಹಸಂಚಾಲಕ್ ಪ್ರೊಫೆಸರ್ ನಾರಾಯಣ ಭಂಡಾರಿ ಚುನಾವಣಾ ಪ್ರಕ್ರಿಯೆ ಮತ್ತು ಮತದಾರರ ಸಂಪರ್ಕ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.

ಈ ಸಭೆಯಲ್ಲಿ ಮಂಡಲ ಬಿಜೆಪಿ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ರಾಯಿಬೆಟ್ಟು, ಮಾಜಿ ಅಧ್ಯಕ್ಷರಾದ ಹರೀಶ್ ಆಚಾರ್ಯ, ಹಾಲಿ ಸದಸ್ಯರಾದ ರವೀಂದ್ರ ಪೂಜಾರಿ ಮತ್ತು ಸಂತೋಷ್ ಗೋಳಿತ ಬೆಟ್ಟು, ಶಕ್ತಿ ಕೇಂದ್ರ ಪ್ರಮುಖರಾದ ಮಧುಕರ ಬಂಗೇರ, ಹಿರಿಯ ಬಿಜೆಪಿ ಕಾರ್ಯಕರ್ತರಾದ ವಿಶ್ವನಾಥ ಗೌಡ ಮುಂತಾದ ಪ್ರಮುಖರು ಭಾಗವಹಿಸಿದರು.