ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯನ್ನು ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಜೀನರಾಜ್ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆ
ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಅಧ್ಯಕ್ಷರಾದ ಆರ್. ಚೆನ್ನಪ್ಪ ಕೋಟ್ಯಾನ್ ಮಹಾಶಕ್ತಿ ಕೇಂದ್ರದ ಹಾಗು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಮಿತಿಯ ಹಾಗೂ ವಿವಿಧ ಮೋರ್ಚಾದ ಪದಾಧಿಕಾರಿಗಳನ್ನು ಅಭಿನಂದಿಸಿ ಹಾಗೂ ಸಂಘಟನಾ ಪರ್ವದ ಬಗ್ಗೆ ಹಾಗೂ ಬೂತ್ ಸಮಿತಿಯನ್ನು ರಚಿಸುವಂತೆ ತಿಳಿಸಿದರು.

ಮಹಾಶಕ್ತಿ ಕೇಂದ್ರದ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು
ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮಂಗಳೂರು ವಿಧಾನಸಭಾ ಕ್ಷೇತ್ರದ ಸಂಘಟನಾ ಪ್ರಭಾರಿ ದಿನೇಶ್ ಆಮ್ಟೂರು, ಮಂಡಲ ಉಪಾಧ್ಯಕ್ಷರು ಗೋಳ್ತಮಜಲು ಮಹಾ ಶಕ್ತಿ ಕೇಂದ್ರದ ಪ್ರಭಾರಿ ರವೀಶ್ ಶೆಟ್ಟಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರು ಕಮಲಾಕ್ಷಿ ಪೂಜಾರಿ ಪ್ರಧಾನ ಕಾರ್ಯದರ್ಶಿ ಲಖಿತ ಆರ್. ಶೆಟ್ಟಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಕಡೇ ಶಿವಾಲಯ ಹಾಗೂ ಮಂಡಲದ ಪ್ರಮುಖರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.