ಮುಖ್ಯ ಮಂತ್ರಿಗಳಾಸ ಸಿದ್ದರಾಮಯ್ಯ ಅವರು  2026-27ನೇ ಸಾಲಿನ‌ ಆಯವ್ಯಯದ ಪೂರ್ವಭಾವಿ ಸಭೆಯ ಭಾಗವಾಗಿ ಇಂದು ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ, ಇಲಾಖೆಯ ಹೊಸ ಯೋಜನೆ ಹಾಗೂ ಅಗತ್ಯ ಬಜೆಟ್ ಅನುದಾನದ ಬಗ್ಗೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ :  2026-27ನೇ ಸಾಲಿನ‌ ಆಯವ್ಯಯದ ಪೂರ್ವಭಾವಿಯಾಗಿ ಇಂದು ತೋಟಗಾರಿಕೆ ಮತ್ತು ಗಣಿ, ಭೂ ವಿಜ್ಞಾನ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ
ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಶಾಸಕರು ಆದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಆರ್ಥಿಕ‌ ಮತ್ತು ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.