ಹಾಸನ: ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೇ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದು, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿರುವ ಘಟನೆ ಹಾಸನ (Hassan) ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಇದನ್ನೂ ಓದಿ : ಜೇಡ್ ಪ್ಲಾಂಟ್ ಅಥವಾ ಲಕ್ಕಿ ಪ್ಲಾಂಟ್‌ನ ಬಗ್ಗೆ ಸ್ವಲ್ಪ ತಿಳಿಯೋಣ
ಇಬ್ಬರು ಯುವತಿಯರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್‌ನಲ್ಲಿ ಜಾಲಿ ರೈಡ್‌ಗೆ ಹೊರಟಿದ್ದರು. ಪ್ರಿಯಾ ಬೈಕ್ ಚಲಾಯಿಸುತ್ತಿದ್ದು, ಸ್ವಾತಿ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದಳು. ಈ ವೇಳೆ ಹಂಪ್ಸ್ ಕಾಣದೇ ಇಬ್ಬರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಪರಿಣಾಮ ಓರ್ವ ಯುವತಿ ಸಾವನ್ನಪ್ಪಿದ್ದು, ಇನ್ನೋರ್ವಳ ಸ್ಥಿತಿ ಗಂಭೀರವಾಗಿದೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಸ್ವಾತಿಯನ್ನು ಬೆಂಗಳೂರಿನ ಆಸ್ಪತ್ರೆ ರವಾನೆ ಮಾಡಲಾಗಿದೆ.
