ಮಂಗಳೂರು ತಾಲೂಕಿನ ಮಂಗಳೂರು ಲೋಕೋಪಯೋಗಿ ವಿಭಾಗದ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಡ್ಡೂರು ಗ್ರಾಮದ ಅಡ್ಡೂರು-ಪೊಳಲಿ ಸೇತುವೆ ಶಿಥಿಲಗೊಂಡು ಘನವಾಹನ ಸಂಚಾರ ನಿಷೇಧಗೊಂಡಿದ್ದು ಈ ಮುಂಜಾಗೃತ ಕ್ರಮದಿಂದಾಗಿ ಸಾರ್ವಜನಿಕರಿಗೆ ತೊಂದರೆಯುಂಟಾಗಿದ್ದು ಈ ಬಗ್ಗೆ ದ.ಕ ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಅವರ ಜೊತೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕ್ರಮಕೈಗೊಂಡು ಮತ್ತು ತಜ್ಞರ ತಂಡದಿಂದ ಸೇತುವೆಯ ದೃಢತೆಯ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಅಮರನಾಥ ಜೈನ್, ಅಪರ ಜಿಲ್ಲಾಧಿಕಾರಿ ಸಂತೋಷ್ ಉಪಸ್ಥಿತರಿದ್ದರು.