ಬೆಂಗಳೂರು: ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಚ್ಎಎಲ್ ವಿಭೂತಿಪುರದಲ್ಲಿ ನಡೆದಿದೆ. ಇದನ್ನೂ ಓದಿ : ವಿಧಾನಸೌಧದಲ್ಲಿ ಇಂದು ಝೆಕ್ ಗಣರಾಜ್ಯದ ಉಪ ಪ್ರಧಾನಮಂತ್ರಿ ಶ್ರೀ ಕಾರೆಲ್ ಹಾವ್ಲಿಕ್ ಅವರ ನೇತೃತ್ವದ ನಿಯೋಗ ಸಿ.ಎಂ. ಭೇಟಿ
ರಾಘವೇಂದ್ರ ಎಂಬಾತ ತನ್ನ ಪತ್ನಿ ಶೃತಿ ಅವರನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ರೀಲ್ಸ್ ವಿಚಾರಕ್ಕೆ ಪದೇ ಪದೇ ಗಲಾಟೆ?
ಶೃತಿ ಯಾವಾಗಲೂ ರೀಲ್ಸ್ ನೋಡುತ್ತಿದ್ದಳು. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ನಿನ್ನೆ ತಡರಾತ್ರಿಯವರೆಗೂ ಶೃತಿ ರೀಲ್ಸ್ ನೋಡುತ್ತಿದ್ದ ವೇಳೆ ಮತ್ತೆ ಗಲಾಟೆ ನಡೆದಿದ್ದು, ಈ ವೇಳೆ ಕೃತ್ಯ ನಡೆದಿದೆ.
ಘಟನೆ ನಿನ್ನೆ ರಾತ್ರಿ ನಡೆದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
