ಮೈಸೂರಿನ ವಿಮಾನ ನಿಲ್ದಾಣಕ್ಕೆ ಇಂದು ಮುಂಜಾನೆ ಬಂದಿಳಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಮಾನ್ಯ ಶ್ರೀ ಅಮಿತ್ ಷಾ ಅವರನ್ನು ರಾಜ್ಯ ಬಿಜೆಪಿ ಪ್ರಮುಖರೊಂದಿಗೆ ಗೌರವ ಪೂರ್ವಕವಾಗಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ವಾಗತಿಸಿದರು.
ಗೃಹ ಸಚಿವರೊಂದಿಗೆ ಆಗಮಿಸಿದ ಕೇಂದ್ರ ಸಚಿವರಾದ ಮಾನ್ಯ Pralhad Joshi ಅವರನ್ನೂ ಸಹ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರುಗಳು ಹಾಗೂ ಇತರ ಪ್ರಮುಖರು ಹಾಜರಿದ್ದರು.