Tumkur Anganwadi Recruitment 2026 – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಬರೋಬ್ಬರಿ 946 ಅಂಗನವಾಡಿ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ತುಮಕೂರು ಜಿಲ್ಲೆಯ ಅರ್ಹ ಮತ್ತು ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವ ಹಾಗೂ ಸಮಾಜ ಸೇವೆಯಲ್ಲಿ ಆಸಕ್ತಿ ಹೊಂದಿರುವ ಮಹಿಳೆಯರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯ ಮೂಲಕ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.  ಇದನ್ನೂ ಓದಿ :ಅನಂತ್ ಅಂಬಾನಿಯ ‘ವಂತಾರ’ಕ್ಕೆ ಫುಟ್ಬಾಲ್ ದಂತಕಥೆ ಮೆಸ್ಸಿ ಭೇಟಿ

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ
ಹುದ್ದೆಗಳ ಸಂಖ್ಯೆ: 946 ಹುದ್ದೆಗಳು
ಉದ್ಯೋಗ ಸ್ಥಳ: ತುಮಕೂರು ಜಿಲ್ಲೆ (ವಿವಿಧ ತಾಲ್ಲೂಕುಗಳು)
ಅರ್ಜಿ ಸಲ್ಲಿಸುವ ಬಗೆ: ಆನ್‌ಲೈನ್ (Online) ಮೂಲಕ ಮಾತ್ರ

ಒಟ್ಟು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು: 117
ಒಟ್ಟು ಅಂಗನವಾಡಿ ಸಹಾಯಕಿ ಹುದ್ದೆಗಳು: 829
ಒಟ್ಟು ಹುದ್ದೆಗಳು: 946

ತುಮಕೂರು ಜಿಲ್ಲೆಯ ಒಟ್ಟು 11 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಈ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಲೇಖನದಲ್ಲಿ ಹುದ್ದೆಯ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಮತ್ತು ಅರ್ಜಿ ಸಲ್ಲಿಸುವ ವಿಧಾನದ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಆಸಕ್ತರು ಕೊನೆಯ ದಿನಾಂಕವಾದ 09 ಜನವರಿ 2026 ರ ಸಂಜೆ 5.30 ರ ಒಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. WCD Tumkur Recruitment 2026