ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಎಂದು ಹೆಸರು ಪುನರ್ ನಾಮಕರಣವಾಗಿ 50 ವರ್ಷ ಪೂರ್ಣವಾಗಿರುವ ನೆನಪಿಗಾಗಿ ‘ಕರ್ನಾಟಕ ಪೊಲೀಸ್ ಸುವರ್ಣ ಮಹೋತ್ಸವ 50’ ವಿಶೇಷ ಅಂಚೆ ಲಕೋಟೆಯನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಗೃಹ ಸಚಿವರಾದ .ಡಾ| ಜಿ.ಪರಮೇಶ್ವರ್ ಬಿಡುಗಡೆ ಮಾಡಿದರು.

ಸಾರ್ವಜನಿಕರ ಸುರಕ್ಷತೆಗಾಗಿ ‘ಮನೆ-ಮನೆಗೆ ಪೊಲೀಸ್’ ಉಪಕ್ರಮದ ಕಿರುಹೊತ್ತಿಗೆ ಹಾಗೂ ಸೈಬರ್ ಅಪರಾಧಗಳಲ್ಲಿ ಅಕ್ರಮ ಹಣ ವರ್ಗಾವಣೆಗೆ ನಕಲಿ ಬ್ಯಾಂಕ್ ಖಾತೆಗಳ ಬಳಕೆಯ ಬಗ್ಗೆ ಅಧ್ಯಯನದ ವರದಿಯನ್ನು ಬಿಡುಗಡೆಗೊಳಿಸಲಾಯಿತು.
ರಾಜ್ಯದಲ್ಲಿ ಕಾನೂನು ಸುವಸ್ಥೆ ಕಾಪಾಡಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ.ಸಲೀಂ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಡಿಜಿ ಪ್ರಶಾಂತ್ ಕುಮಾರ್ ಠಾಕೂರ್ ಅವರು ಉಪಸ್ಥಿತರಿದ್ದರು.