ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಇಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರದಲ್ಲಿಯೇ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಹಾಗೂ ಮೂಲ್ಕಿ-ಮೂಡಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ಉಪಸ್ಥಿತರಿದ್ದರು.