ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಇದರ ಪ್ರಥಮ ಕಾರ್ಯಕಾರಿಣಿ ಸಭೆಯು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಯಶೋಧರ ಕರ್ಬೆಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಯಲ್ಲಿ ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಒ.ಬಿ.ಸಿ. ಜಿಲ್ಲಾಧ್ಯಕ್ಷರಾದ ಮಹೇಶ್ ಜೋಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಬಂಟ್ವಾಳ ಮಂಡಲ ಓಬಿಸಿ ಪ್ರಬಾರಿಯಾದ ವಿನೋದ್ ಬೆಳ್ಳಾಯಾರು, ಓಬಿಸಿ ಜಿಲ್ಲಾ ಉಪಾಧ್ಯಕ್ಷರಾದ ಕಿಶೋರ್ ಪಲ್ಲಿಪಾಡಿ, ಬಿಜೆಪಿ ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಸುದರ್ಶನ್ ಬಜ, ಶಿವಪ್ರಸಾದ್ ಶೆಟ್ಟಿ, ಹಾಗೂ ಒಬಿಸಿ ಮಂಡಲದ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಈ ಸಭೆಯನ್ನು ಓಬಿಸಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ದಾಸ್ ಕೊಟ್ಟಾರಿ ಸ್ವಾಗತಿಸಿ , ಉಮೇಶ್ ಅರಳರವರು ವಂದಿಸಿದರು.