ಬೆಂಗಳೂರು ಉತ್ತರ ಲೋಕಾಸಭಾ ಕ್ಷೇತ್ರದ ವೃಷಭಾವತಿ ನಗರ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿಂದು ಬೃಹತ್ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿದರು.
ಭಾರತವನ್ನು ವಿಶ್ವದಲ್ಲೇ ನಂ1 ಸ್ಥಾನಕ್ಕೆ ಕೊಂಡೊಯ್ಯುವ ಸಂಕಲ್ಪ ತೊಟ್ಟಿರುವ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ಕೈ ಬಲಪಡಿಸಲು ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿ ಕು. Shobha Karandlaje ಅವರನ್ನು ಪ್ರಚಂಡ ಮತಗಳ ಅಂತರಗಳಿಂದ ಗೆಲ್ಲಿಸುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಜನಪ್ರಿಯ ಶಾಸಕರಾದ ಶ್ರೀ ಕೆ.ಗೋಪಾಲಯ್ಯ, ಮಾಜಿ ಶಾಸಕರಾದ ಶ್ರೀ ನೆ.ಲ.ನರೇಂದ್ರ ಬಾಬು, ಜಿಲ್ಲಾಧ್ಯಕ್ಷರಾದ ಶ್ರೀ ಹರೀಶ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ರಮೇಶ್ ಗೌಡ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮತದಾರರು ಭಾಗವಹಿಸಿದ್ದರು.