ರಾಮಾಯ ರಾಮಭದ್ರಾಯ
ರಾಮ ಚಂದ್ರಾಯ ವೇಧಸೇ
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ”

ಶತಮಾನಗಳ ಕನಸು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ಆಯೋಜಿಸಿರುವ ‘ರಾಮತಾರಕ ಮಹಾಯಾಗ’ದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗವಹಿಸಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ಶ್ರೀರಾಮನನ್ನು ಆರಾಧಿಸಲಾಯಿತು.

ಇದೇ ವೇಳೆ ಆಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ನೇರಪ್ರಸಾರದಲ್ಲಿ ವೀಕ್ಷಿಸುವ ಮೂಲಕ ಬಾಲರಾಮನ ಪವಿತ್ರ ದರುಶನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj Bommai, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ P Rajeev, ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ K Gopalaiah, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ Malavika Avinash, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಕು. ಮಂಜುಳಾ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಹರೀಶ್, ಮುಖಂಡರಾದ ಶ್ರೀ ನೆ.ಲ.ನರೇಂದ್ರ ಬಾಬು, ಶ್ರೀ ರಾಜೇಂದ್ರ ಕುಮಾರ್, ರಾಜ್ಯ ಕಾರ್ಯದರ್ಶಿ ಶ್ರೀ ಶರಣು ತಳ್ಳೀಕೆರೆ, ವಿವಿಧ ಮಠಗಳ ಪರಮಪೂಜ್ಯ ಶ್ರೀಗಳು, ಸ್ಥಳೀಯ ಮುಖಂಡರು ಹಾಗೂ ರಾಮಭಕ್ತರು ಭಾಗವಹಿಸಿದ್ದರು.