ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ (Air Force) ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡು ಶಾಲಾ ಕಟ್ಟಡಕ್ಕೆ ಅಪ್ಪಳಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

ಸಾವನ್ನಪ್ಪಿದವರಲ್ಲಿ 25 ಮಕ್ಕಳಿದ್ದಾರೆ. ಸುಮಾರು 170 ಮಂದಿ ಗಾಯಗೊಂಡಿದ್ದು, ಅವರಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಶಾಲೆಯ ಸಿಬ್ಬಂದಿ ಸೈದೂರ್ ರೆಹಮಾನ್ ತಿಳಿಸಿದ್ದಾರೆ. ಇದನ್ನೂ ಓದಿ : ದೆಹಲಿಯಲ್ಲಿ ಭೂಕಂಪನ ಅನುಭವ – 3.2 ತೀವ್ರತೆ ದಾಖಲು

ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ಢಾಕಾದ ಉತ್ತರದ (Uttara) ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿತ್ತು. ಇದನ್ನೂ ಓದಿ :  20 ವರ್ಷ ಕೋಮಾದಲ್ಲಿದ್ದ ಸೌದಿ ರಾಜಕುಮಾರ `ಸ್ಲೀಪಿಂಗ್ ಪ್ರಿನ್ಸ್’ ನಿಧನ

ಅಪಘಾತಕ್ಕೀಡಾದ ಎಫ್-7 ಬಿಜಿಐ ತರಬೇತಿ ವಿಮಾನವು ಬಾಂಗ್ಲಾದೇಶದ ನಿರ್ವಹಿಸುತ್ತಿರುವ 16 ವಿಮಾನಗಳಲ್ಲಿ ಒಂದಾಗಿದೆ. ಇದು ಚೀನಾದ ಜೆ-7 ಯುದ್ಧ ವಿಮಾನದ ಮುಂದುವರಿದ ಆವೃತ್ತಿಯ ವಿಮಾನವಾಗಿದೆ.