ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಪದಾಧಿಕಾರಿಗಳ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳ ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳ ಸಭೆಯು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಬಿ. ಸಿ. ರೋಡು ಬಿಜೆಪಿ ಕಛೇರಿಯಲ್ಲಿ ಜರಗಿತು.
ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪ್ರತಿ ಬೂತಿನಲ್ಲಿ ಗೋಡೆ ಬರಹ ಶಕ್ತಿ ವಂದನ ಹಾಗೂ ಫಲಾನುಭವಿಗಳ ಸಂಪರ್ಕ ಕಾರ್ಯಕ್ರಮ ಅನುಷ್ಠಾನ ಮಾಡುವ ಬಗ್ಗೆ ಮಾಹಿತಿಯನ್ನು ಈ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ವಿಕಾಸ್ ಪುತ್ತೂರು ನೀಡಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಮಂಡಲದ ಪ್ರಭಾರಿಯಾಗಿ ಜಿಲ್ಲೆಯಿಂದ ನಿಯುಕ್ತಿಗೊಂಡ ಜಗದೀಶ್ ಶೇಣವ ಇವರನ್ನು ಶಾಲು ಹಾಕಿ ಅಭಿನಂದಿಸಲಾಯಿತು. ನಂತರ ಮಾತನಾಡಿದ ಅವರು ಮತ್ತೊಮ್ಮೆ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗುವುದು ನಿಶ್ಚಿತ. ಆದುದರಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ರವರ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಿದ್ದು ಪಕ್ಷದ ಪ್ರಮುಖರು ಕಾರ್ಯಕರ್ತರು ಜನಪ್ರತಿನಿಧಿಗಳು ಹೆಚ್ಚಿನ ಮುತುವರ್ಜಿಯಲ್ಲಿ ಮುಂದಿನ 50 ದಿನ ಪಕ್ಷದ ಕೆಲಸ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ವಿನಂತಿಸಿದರು.
ಸಭೆಯಲ್ಲಿ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ರವೀಶ್ ಶೆಟ್ಟಿ ಕರ್ಕಳ ರಾಮದಾಸ್ ಬಂಟ್ವಾಳ ಉಪಸ್ಥಿತರಿದ್ದರು.