ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ “ಬಳ್ಳಾರಿ ಚಲೋ” ಕಾರ್ಯಕ್ರಮದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಆರ್. ಚೆನ್ನಪ್ಪ ಕೋಟ್ಯಾನ್, ಮಂಡಲ ಉಪಾಧ್ಯಕ್ಷರಾದ ವಸಂತ ಅಣ್ಣಳಿಕೆ, ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ ಹಾಗೂ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರರಾದ ಮಾಧವ ಮಾವೆ,ಪ್ರಮುಖರಾದ ವಿಕಾಸ್ ಪುತ್ತೂರು, ರಶ್ಮಿತ್ ಶೆಟ್ಟಿ,ಮಾಧ್ಯಮ ಪ್ರಮುಖರಾದ ಪುರುಷೋತ್ತಮ ಬಾರೇಕ್ಕಿನಡೆ, ಮಂಡಲ ರೈತ ಮೋರ್ಚಾ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಾಣಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಅರವಿಂದ ರೈ, ಪ್ರಧಾನ ಕಾರ್ಯದರ್ಶಿ ನಾಗೇಶ್ ಭಂಡಾರಿ, ಸಂಗಬೆಟ್ಟು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ರಾಯಿಬೆಟ್ಟು, ಸಹಕಾರಿ ಪ್ರಕೋಷ್ಠದ ಸಂಚಾಲಕರಾದ ಜಯರಾಮ್ ರೈ, ಕಚೇರಿ ಕಾರ್ಯದರ್ಶಿ ಪ್ರಣಾಮ್ ರಾಜ್ ಹಾಗೂ ಮನೋಜ್ ಕೋಟ್ಯಾನ್ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಕ್ಷದ ಸಂಘಟನಾ ಶಕ್ತಿಯನ್ನು ಪ್ರದರ್ಶಿಸಿದರು.