ಬಂಟ್ವಾಳ: ಭಾರತದ ಸಂವಿಧಾನವು ವಿಶ್ವದಲ್ಲಿಯೇ ಅತೀವದೊಡ್ಡ ಸಂವಿಧಾನವಾಗಿದ್ದು, ಸಂವಿಧಾನದಲ್ಲಿ ಅಡಕವಾಗಿರುವ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನಮ್ಮ ಜೀವನದಲ್ಲಿ ಪಾಲಿಸಿಕೊಂಡು ಉತ್ತಮ ಬದುಕನ್ನು ಕಟ್ಟುವುದರ ಜೊತೆಗೆ ಪ್ರಜಾಪ್ರಭುತ್ವವನ್ನು ಬಲಪಡಿಸಿಕೊಳ್ಳಬೇಕ್ಕೆಂದು ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುದರ್ಶನ್ ಬಿ. ಹೇಳಿದರು.
ಅವರು ಬಂಟ್ವಾಳ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ಆಯೋಜಿಸಲಾದ ‘ಸಂವಿಧಾನ ದನಾಚರಣೆ’ಯನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮೀನಾರಾಯಣ ಎನ್. ಮತ್ತು
ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮತ್ತು ಕನ್ನಡ ಉಪನ್ಯಾಸಕ ಶಶಿಧರ್ ಎಸ್. ಸ್ವಾಗಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ರೂಪ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿಗಳಿಗೆ
ಸಂವಿಧಾನ ಪ್ರಸ್ತಾವನೆಯನ್ನು ಭೋಧಿಸಿ, ವಂದಸಿದರು.