ಬಂಟ್ವಾಳ ಮಂಡಲದ ಸಹಕಾರಿ ಪ್ರಕೋಷ್ಟದ ಸಭೆಯು ಮಂಡಲದ ಸಹಕಾರಿ ಪ್ರಕೋಷ್ಟದ ಸಂಚಾಲಕರಾದ ಶ್ರೀ ಜಯರಾಮ್ ಶೆಟ್ಟಿ ಬೋಳಂತೂರು ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಪ್ರಕೋಷ್ಟದ ಸಂಚಾಲಕರಾದ ಟಿ.ಜಿ. ರಾಜಾರಾಮ್ ಭಟ್ ಸಹಕಾರಿ ಪ್ರಕೋಷ್ಟದ ಜವಾಬ್ದಾರಿಯನ್ನು ಮತ್ತು ಕರ್ತವ್ಯವನ್ನು ಹೇಗೆ ನಿಭಾಯಿಸಬೇಕು ಎಂದು ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಆರ್. ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಪ್ರಕೋಷ್ಟದ ಸದಸ್ಯರಾದ ರವೀಂದ್ರ ಕಂಬಳಿ, ಜಯಶಂಕರ ಬಾಸ್ರಿತ್ತಾಯ, ಶಿವಪ್ಪ ಗೌಡ ನಿನ್ನಿಕಲ್ಲು, ನಾರಾಯಣ ಶೆಟ್ಟಿ ಕುಲ್ಯಾರ್ ಉಪಸ್ಥಿತರಿದ್ದರು.

ಪ್ರಕೋಷ್ಟದ ಸಹ ಸಂಚಾಲಕರಾದ ಪದ್ಮನಾಭ ದೇವಾಡಿಗ ಸ್ವಾಗತಿಸಿ, ವಂದಿಸಿದರು.