ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯು ಕ್ಷೇತ್ರ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಉಪಸ್ಥಿತಿಯಲ್ಲಿ ಬಿ.ಸಿ. ರೋಡು ಸ್ಪರ್ಶ ಕಲಾ ಮಂದಿರದಲ್ಲಿ ಜರುಗಿತು.
ಕಾರ್ಯಕಾರಿಣಿ ಸಭೆಯನ್ನು ರಾಜೇಶ್ ನಾಯ್ಕ್ ಉದ್ಘಾಟಿಸಿ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಬೇಕಾದರೆ ಪ್ರತಿ ಬೂತಿನಲ್ಲಿ ಮನೆ ಸಂಪರ್ಕ ಮಾಡಿ ನರೇಂದ್ರ ಮೋದಿ ಆಡಳಿತದ ಸಾಧನೆಗಳನ್ನು ತಿಳಿಸುವ ಮಹತ್ಕಾರ್ಯಗಳನ್ನು ಪಕ್ಷದ ಕಾರ್ಯಕರ್ತರು ಜನಪ್ರತಿನಿಧಿಗಳು ಮಾಡಬೇಕು.
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 50000 ಮತಗಳ ಮುನ್ನಡೆ ಸಾಧಿಸಬೇಕೆಂದು ತಿಳಿಸಿದರು. ದೇಶದ ಕೋಟ್ಯಾಂತರ ಜನರ ನಿರೀಕ್ಷೆ ಈ ದೇಶವನ್ನು ಮತ್ತೊಮ್ಮೆ ನರೇಂದ್ರ ಮೋದಿ ಕೈಯಲ್ಲಿ ಕೊಡಬೇಕೆಂದು ಅಪೇಕ್ಷೆ ಪಟ್ಟಿದ್ದಾರೆ.
ಕಳೆದ 10 ವರ್ಷದ ಆಡಳಿತದಲ್ಲಿ ಜಗತ್ತು ಮೆಚ್ಚುಗೆ ಪಡೆಯುವ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಮೂರನೆ ಅವಧಿಗೆ ಮತ್ತೋಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕ್ಷೇತ್ರ ಚುನಾವಣೆ ನಿರ್ವಹಣಾ ಸಮಿತಿಯ ಸಂಚಾಲಕರಾದ ದೇವಪ್ಪ ಪೂಜಾರಿ, ಕ್ಷೇತ್ರ ಚುನಾವಣಾ ಪ್ರಭಾರಿ ಜಗದೀಶ್ ಶೆಣವ, ಮಾಜಿ ಶಾಸಕರಾದ ಶ್ರೀ ನಾಗರಾಜ ಶೆಟ್ಟಿ, ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ,
ರವೀಶ್ ಶೆಟ್ಟಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ರಾಮದಾಸ್ ಬಂಟ್ವಾಳ, ದಿನೇಶ್ ಅಮ್ಟೂರು, ಕೃಷ್ಣಪ್ಪ ಪೂಜಾರಿ, ಲಕಿತ ಶೆಟ್ಟಿ, ರವಿಂದ್ರ ಕಂಬಳಿ, ಕಮಲಾಕ್ಷಿ ಕೆ. ಪೂಜಾರಿ, ಮಾಧವ ಮಾವೆ, ಕ್ಷೇತ್ರ ಪದಾಧಿಕಾರಿಗಳು, ಮೋರ್ಚಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರದ ಪ್ರಮುಖರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪುರಸಭೆಯ ಸದಸ್ಯರು, ಜಿಲ್ಲಾ ಮಟ್ಟದ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.