ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಭ್ರಷ್ಟಾಚಾರ ನಿರ್ಮೂಲನಾ ಸಪ್ತಾಹದ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಪ್ರಾಂಶುಪಾಲರಾದ ಡಾ.ಸುಯೋಗ ವರ್ಧನ್ ಡಿ.ಎಮ್. ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಎನ್. ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ. ಎಲ್ಲರನ್ನೂ ಸ್ವಾಗತಿಸಿ, ಭ್ರಷ್ಟಾಚಾರ ನಿರ್ಮೂಲನೆಯ ಮಹತ್ವವನ್ನು ತಿಳಿಸಿದರು.
ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಶ್ರೀ ಶಿವಣ್ಣ ಪ್ರಭು ಉಪಸ್ಥಿತರಿದ್ದರು.