ಬಂಟ್ವಾಳ: ಮೊದಲ ಪಾಠ ಶಾಲೆ ಮನೆಯಾದ್ದರಿಂದ ಪೋಷಕರು ಸಂಸ್ಕಾರವನ್ನು ಅಳವಡಿಸಿಕೊಂಡಿದ್ದರೆ ಮಕ್ಕಳು ಸಹಜವಾಗಿಅದನ್ನು ಪಾಲಿಸುತ್ತಾರೆ. ವಿದ್ಯಾರ್ಥಿಗಳು ಅಧ್ಯಯನದ ಅವಧಿಯಲ್ಲಿ ಬೇರೆಡೆಗೆ ಆಕರ್ಷಿತರಾಗದೇ ಗುರಿಯೆಡೆಗೆ ಗಮನಕೊಟ್ಟರೆ ಉತ್ತಮವಾದ ಭವಿಷ್ಯ ರೂಪಿತವಾಗುತ್ತದೆ. ಎಲ್ಲಾ ಅಭಿವೃದ್ಧಿಗೂ ಪೋಷಕರುತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿರುತ್ತಾರೆ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಇರುತ್ತದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಶ್ರೀ ಸೀತಾರಾಮ ಕುಮಾರ್‌ ಕಟೀಲು ವಿದ್ಯಾರ್ಥಿಗಳನ್ನುದ್ದೇಶಿಸಿ ಕರೆ ನೀಡಿದರು.

ಅವರು ಬಂಟ್ವಾಳ ವಿದ್ಯಾಗಿರಿಯ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ವಾರ್ಷಿಕೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಶ್ರೀಮತಿ ರೇಖಾ ಕೆ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಸುಪ್ರೀತ್ ಕಡಕೋಳ್ ಪದವಿ ಕಾಲೇಜು ವಾರ್ಷಿಕ ವರದಿ ವಾಚಿಸಿದರು. ಎಸ್.ವಿ.ಎಸ್. ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುದರ್ಶನ್ ಬಿ.ಪದವಿ ಪೂರ್ವಕಾಲೇಜಿನ ವರದಿ ವಾಚಿಸಿದರು. ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀಶಿವಣ್ಣಪ್ರಭು ಕೆ ಅತಿಥಿಗಳನ್ನು ಪರಿಚಯಿಸಿದರು. ಪ್ರಾಧ್ಯಾಪಕರಾದ ಶ್ರೀಮತಿ ಗೀತಾ ಸ್ವಾಗತಿಸಿ, ಶ್ರೀಮತಿ ರೂಪಾ ವಂದಿಸಿದರು. ಕಾರ್ಯಕ್ರಮದಲ್ಲಿ ೨೦೨೨-೨೩ನೇ ಸಾಲಿನ ವಿಶ್ವವಿದ್ಯಾಲಯ ಮಟ್ಟರ‍್ಯಾಂಕ್ ವಿಜೇತರಿಗೆ ಸನ್ಮಾನಿಸಲಾಯಿತು.

ಶೈಕ್ಷಣಿಕ ಹಾಗೂ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ನಂತರಎಸ್.ವಿ.ಎಸ್‌ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳಿಂದ ‘ಶ್ರೀಚಕ್ರ ವಿಜಯ’ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಲಾಯಿತು. ಕೊನೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.