ಬಂಟ್ವಾಳ: ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ
ಹೆಚ್ಚೇನುಗಳು ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟ ಘಟನೆ ಬಿ.ಕಸಬಾ ಗ್ರಾಮದ ಕೆಮ್ಮಟ್ಟೆ ಗುಡ್ಡೆಯಲ್ಲಿ ನಡೆದಿದೆ. ಇದನ್ನೂ ಓದಿ : ಕಜಿಯಾ ಲಿಜ್ ಮೆಜೊಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ
ಮೃ*ತರನ್ನು ಕೆಮ್ಮಟ್ಟೆ ಗುಡ್ಡೆ ನಿವಾಸಿ ಕಮಲಾ (74) ಎಂದು ಗುರುತಿಸಲಾಗಿದೆ. ಕಮಲಾ ಅವರು ಸೆ.23ರಂದು ಬೆಳಗ್ಗೆ 9.30ರ ಸುಮಾರಿಗೆ ಮನೆಯ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಹುಲ್ಲು ತೆಗೆಯಲು ಹಾಗೂ ಕೃಷಿ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಹೆಚ್ಚೇನುಗಳು ಅವರ ಬೆನ್ನು, ಕಾಲು, ಮುಖ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಕಚ್ಚಿದ್ದು, ಬಳಿಕ ಮನೆಗೆ ಬಂದ ಅವರು ಘಟನೆ ಕುರಿತು ಪುತ್ರ ದಿನೇಶ್ ಅವರಿಗೆ ತಿಳಿಸಿದ್ದಾರೆ.
ತಕ್ಷಣ ದಿನೇಶ್ ಅವರು ಕಮಲಾ ಅವರನ್ನು ಬಂಟ್ವಾಳದ ಕ್ಲಿನಿಕ್‌ಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಬಳಿಕ ಮನೆಗೆ ಕರೆತಂದಿದ್ದರು. ಮಧ್ಯಾಹ್ನ ಸುಮಾರು 1.30ರ ವೇಳೆಗೆ ಕಮಲಾ ಅವರು ಮಾತನಾಡದೆ ಅಸ್ವಸ್ಥ ಸ್ಥಿತಿಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಅಂಬುಲೆನ್ಸ್ ಮೂಲಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗಮಧ್ಯೆಯೇ ಮೃ*ತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
