ಬಂಟ್ವಾಳ : ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಉತ್ತೇಜನ ನೀಡುತ್ತದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆಯನ್ನು ಒದಗಿಸಿಕೊಡುತ್ತದೆ. ಇಂತಹ ವಿಶೇಷ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಸಿದ್ಧಕಟ್ಟೆ ವ್ಯವಸಾಯ ಕೃಷಿಪತ್ತಿನ ಸಹಕಾರಿ ಸಂಘ (ನಿ.) ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.
ರಾಯಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ವೆಂಕಟರಮಣ ಸ್ವಾಮೀ ಸಮೂಹ ಸಂಸ್ಥೆಗಳ ಆಡಳಿತಾತ್ಮಕ ಪ್ರಾಂಶುಪಾಲರಾದ ಡಾ.ಸುಯೋಗವರ್ಧನ್‌ಡಿ. ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಅತೀ ಅಗತ್ಯ. ರಾಷ್ಟ್ರೀಯ ಸೇವಾ ಯೋಜನೆಯ ಇಂತಹ ವಿಶೇಷ ಶಿಬಿರಗಳು ಬದುಕಿನ ಕಲೆಯನ್ನು ಕಲಿಸಿಕೊಡುತ್ತದೆ ಎಂದರು.
ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ, ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ರಾಯಿ ಇದರ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ಆಚಾರ್ಯ, ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ರಾಯಿ ಇದರ ಮುಖ್ಯೋಪಾಧ್ಯಾಯಿನಿ ಜಾನೆಟ್ ಕೊನ್ಸೆಸೋ, ಪತ್ರಕರ್ತ ಮೋಹನ್ ಕೆ. ಶ್ರೀಯಾನ್, ಲಯನ್ಸ್ಕ್ಲಬ್‌ಅಧ್ಯಕ್ಷ ಅನಿಲ್ ಪ್ರಭು, ದಿನೇಶ್ ಶೆಟ್ಟಿ ಮಾಡಂದೂರು, ಎನ್ನೆಸ್ಸೆಸ್‌ಘಟಕ ನಾಯಕರಾದಧನುಷ್ ಮತ್ತು ಪ್ರಾಜ್ಞವಿ ಉಪಸ್ಥಿತರಿದ್ದರು.
ಶಿಭಿರಾಧಿಕಾರಿ ಶಶಿಧರ್.ಎಸ್. ಸ್ವಾಗತಿಸಿದರು, ಸಹ ಶಿಭಿರಾಧಿಕಾರಿ ಶ್ರೀಮತಿ ರೂಪಾ ವಂದಿಸಿದರು. ಕನ್ನಡಉಪನ್ಯಾಸಕ ಮನೋಹರ್‌ಎಸ್. ದೊಡ್ಡಮನಿ ಕಾರ್ಯಕ್ರಮ ನಿರೂಪಿಸಿದರು.