ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ, ಇಲ್ಲಿ 78 ನೇ ಸ್ವಾತಂತ್ರö್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಯುತ ಹರಿಪ್ರಸಾದ್ ಧ್ವಜಾರೋಹಣವನ್ನು ನೆರವೇರಿಸಿದರು.

ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಶ್ರೀಯುತ ಸುದರ್ಶನ್ ಬಿ ಪ್ರಾಂಶುಪಾಲರು, ಎಸ್.ವಿ.ಎಸ್. ಪದವಿಪೂರ್ವ ಕಾಲೇಜು, ಬಂಟ್ವಾಳ ಇವರು ಸ್ವಾತಂತ್ರö್ಯ ಸಿಕ್ಕ ದಿನವನ್ನು ಭಾರತೀಯಾರಾದ ನಾವು ಹೆಮ್ಮೆಯಿಂದ ನೆನೆಯಬೇಕಿದೆ. ಬಲಿದಾನವನ್ನು ನೀಡಿದ ಎಲ್ಲಾ ವೀರರನ್ನು ನೆನೆದು ಅವರಿಗೆ ನಮನ ಸಲ್ಲಿಸಬೇಕಿದೆ ಅದರ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ತಿಳಿಯಬೇಕಿದೆ ಎಂದರು.

ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯ್ಯಾಯರಾದ ಶ್ರೀಯುತ ಸತೀಶ್ ಬಂಗೇರ ಇವರು ಸ್ವಾತಂತ್ರೊö್ಯÃತ್ಸವದ ಮಹತ್ವದ ಕುರಿತು ಮಾತನಾಡಿದರು. ಸ್ವಾತಂತ್ರೊö್ಯÃತ್ಸವದ ಅಂಗವಾಗಿ ನಡೆದ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆೆ ಬಹುಮಾನವನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಪೂರ್ವಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿಯಾದ ಶ್ರೀಮತಿ ಹೇಮಲತಾ ಮತ್ತು ಸಂಸ್ಕೃತ ಪ್ರಾಧ್ಯಾಪಕರಾದ ಪರಮೇಶ್ವರ ಹೆಗ್ಡೆ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಚಿರಾಗ್ ಡಿ ಸ್ವಾಗತಿಸಿ , ಕುಮಾರಿ ಎನ್ ಶ್ರೀನಿಧಿ ರಾವ್ ಕಾರ್ಯಕ್ರಮವನ್ನು ನಿರೂಪಿಸಿ, ಆರ್ತಿ ಪಿ ಸುವರ್ಣ ವಂದಿಸಿದರು.