ಕಾಯಕ ತತ್ವವನ್ನು ಇಡೀ ವಿಶ್ವಕ್ಕೆ ಸಾರಿದ ಕಾಯಕಯೋಗಿ, ಸಮಾನತೆಯ ಸಮಾಜದ ಸೃಷ್ಟಿಗಾಗಿ ಹೋರಾಡಿದ ಸಾಮಾಜಿಕ ಹರಿಕಾರ, ಶ್ರೀ ಬಸವೇಶ್ವರರ ಜಯಂತಿಯ ಅಂಗವಾಗಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.ಬಸವಣ್ಣನವರು ಅಂದಿಗೂ, ಇಂದಿಗೂ, ಎಂದೆಂದಿಗೂ ವಿಶ್ವಗುರುವಾಗಿ ಏಕೆ ನಿಲ್ಲುತ್ತಾರೆ ಎಂದರೆ ಅವರ ಕಾಯಕಕ್ರಾಂತಿ ಅನುಸರಿಸಿದವರು ಸ್ವಾಭಿಮಾನಿಗಳಾಗಿ ಎದ್ದುನಿಲ್ಲುತ್ತಾರೆ, ಜನರ ಕಲ್ಯಾಣಕ್ಕಾಗಿ ತಮ್ಮನ್ನು ಸಮರ್ಪಿಸಿಕೊಳ್ಳುತ್ತಾರೆ. ನಮ್ಮ ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಸಹ ಬಸವಣ್ಣನವರ ತತ್ವವನ್ನು ಅನುಸರಿಸಿ ಮುನ್ನಡೆಯುತ್ತಿದ್ದು, ವಿಶ್ವಕರ್ಮ, ಮೇಕ್ ಇನ್ ಇಂಡಿಯಾ, ಕೌಶಲ್ಯ ಭಾರತ ಮೊದಲಾದ ಅನೇಕ ಯೋಜನೆಗಳಿಗೆ ಅವರಿಗೆ ಸ್ಪೂರ್ತಿ ನೀಡಿದ್ದು ಬಸವಣ್ಣನವರ ಕಾಯಕ ಕ್ರಾಂತಿ. ಆದ್ದರಿಂದ ನಾವೆಲ್ಲರೂ ಬಸವತತ್ವ ಅನುಸರಿಸಿ, ಸ್ವಾವಲಂಬಿ ಭಾರತ ಹಾಗೂ ಸಮೃದ್ಧ ಕರ್ನಾಟಕಕ್ಕಾಗಿ ದುಡಿಯಬೇಕೆಂಬ ಸಂಕಲ್ಪ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ.ಡಿ.ಲಕ್ಷ್ಮಿನಾರಾಯಣ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ ರಾಜೀವ್, ರಾಜ್ಯ ಕಾರ್ಯದರ್ಶಿ ಶ್ರೀ ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಹರೀಶ್, ಮುಖಂಡರಾದ ಶ್ರೀ ಚಿ.ನಾ.ರಾಮು, ಕಾರ್ಯಾಲಯ ಸಹ ಕಾರ್ಯದರ್ಶಿ ಶ್ರೀ ವಿಶ್ವನಾಥ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.