ಚಿಕ್ಕಮಗಳೂರು: ಬಾತುಕೋಳಿ (Duck) ಹಿಡಿಯಲು ಹೋಗಿ 5-6 ವರ್ಷದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ (Lake) ಮುಳುಗಿದ್ದ ಒಂದು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಇದನ್ನೂ ಓದಿ : ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ – ಇ-ರೇಷ್ಮೆ ಪೋರ್ಟಲನ್ನು ಲೋಕಾರ್ಪಣೆಗೊಳಿಸಿದ – ಸಿ.ಎಂ.

ಮೃತರನ್ನು ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷದ ಅರ್ಮಾನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಕ್ಕಳೆಲ್ಲ ಬಾತುಕೋಳಿ ಕೆರೆಗೆ ಹೋಯಿತು ಎಂದು ಹಿಡಿಯಲು ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆ ಮುಂಭಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.