ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ  11 ಸೀಸನ್‌ಗಳನ್ನ ಯಶಸ್ವಿಯಾಗಿ ಪೂರೈಸಿದೆ. ಇದೀಗ ಸೀಸನ್ 12ಕ್ಕೆ ಕೆಲವೇ ತಿಂಗಳು ಬಾಕಿ ಇರೋವಾಗಲೇ ಬಿಗ್‌ಬಾಸ್ ತಂಡದ ಕಡೆಯಿಂದ ಹಾಗೂ ಕಿಚ್ಚ ಸುದೀಪ್ ಅವರಿಂದ ಬಿಗ್ ಅಪ್‌ಡೇಟ್ ಸಿಕ್ಕಿದೆ.   ಇದನ್ನೂ ಓದಿ : ರಕ್ತಸಿಕ್ತ ಅವತಾರದಲ್ಲಿ ನಟಿ ರಶ್ಮಿಕಾ ಮಂದಣ್ಣ

ಹೌದು, ಕಿಚ್ಚ ಸುದೀಪ್  ಅವರೇ 12ನೇ ಸೀಸನ್‌ಗೂ ನಿರೂಪಣೆ ಮಾಡುವುದಾಗಿ ಸ್ಪಷ್ಟನೆ ಸಿಕ್ಕಿದೆ. ಬಿಗ್‌ಬಾಸ್ ಸಂಯೋಜಕರು ಹಾಗೂ ಕಲರ್ಸ್‌ ತಂಡ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಪ್ರಕಟಿಸಿದೆ.

1ನೇ ಸೀಸನ್‌ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳಿದ್ದರು. ಇದಾದ ಬಳಿಕ ಸಾಕಷ್ಟು ಚರ್ಚೆಗಳು ಶುರುವಾಗಿದ್ವು, ಈ ಬಗ್ಗೆ ಕಿಚ್ಚ ಸುದೀಪ್ ಕೂಡಾ ಕಾದು ನೋಡಿ ಅನ್ನೋ ಅಭಿಪ್ರಾಯ ಹಂಚಿಕೊಂಡಿದ್ರು. ಇದೀಗ ಮತ್ತೆ 12ನೇ ಸೀಸನ್ ನಡೆಸಿಕೊಡುವ ಬಗ್ಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ ಕಿಚ್ಚ. ಇದನ್ನೂ ಓದಿ : ಕೆ.ಡಿ.ಪಿ.ಸಭೆ : 50℅ ಮಹಿಳೆಯರು ಹೆರಿಗೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬರುತ್ತಾರೆ – ರಾಜೇಶ್ ನಾಯ್ಕ್

ಕಿಚ್ಚ ಸುದೀಪ್ ಇಲ್ಲದೇ ಬಿಗ್‌ಬಾಸ್ ನಿರೂಪಣೆಯನ್ನ ಊಹೆ ಮಾಡಿಕೊಳ್ಳುವುದಕ್ಕೂ ಆಗುವುದಿಲ್ಲ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಹೀಗಾಗಿ ಕಿಚ್ಚ ಸುದೀಪ್ ಈ ಬಾರಿಯ ಬಿಗ್‌ಬಾಸ್ ಕಾರ್ಯಕ್ರಮವನ್ನ ಮುಂದುವರಿಸಿದ್ದಾರೆ.