ಬಿ.ಸಿ.ರೋಡ್ ಪೊಲೀಸ್ ಲೈನ್ ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಫೆ.17ರಂದು ಬೆಳಗ್ಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿ ದೇವಸ್ಥಾನದ ಅಭಿವೃದ್ಧಿ ಸುಂದರವಾಗಿದ್ದು, ಆಕರ್ಷಣೀಯವಾಗಿದೆ. ಸಮಿತಿ ಮತ್ತು ಸಂಬಂಧಿಸಿದ ಸದಸ್ಯರಿಗೆ ಅಭಿನಂದನೆ, ಭಕ್ತರಿಗೆ ತಾಯಿಯ ಆಶೀರ್ವಾದ ಸದಾ ಇರಲಿ ಎಂದು ಈ ಸಂದರ್ಭ ಅವರು ಶುಭ ಹಾರೈಸಿದರು.

ಇದೇ ವೇಳೆ ಯಾಗಶಾಲೆಯನ್ನು ನಿವೃತ್ತ ತಹಸೀಲ್ದಾರ್ ಕೆ.ಮೋಹನ ರಾವ್ ಉದ್ಘಾಟಿಸಿದರು.

ಸೇವಾ ಕಚೇರಿಯನ್ನು ಶ್ರೀ ಅಣ್ಣಪ್ಪ ಪಂಜುರ್ಲಿ ಬಂಟ ದೈವಸ್ಥಾನ ಮಂಗ್ಲಿಮಾರ್ನ ಆಡಳಿತ ಮೊಕ್ತೇಸರರಾದ ರವಿಶಂಕರ ಶೆಟ್ಟಿ ಬಡಾಜೆಗುತ್ತು ಉದ್ಘಾಟಿಸಿದರು.

ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಕಾರಂತ ನರಿಕೊಂಬು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ, ಗೌರವಾಧ್ಯಕ್ಷ ಅಶ್ವನಿ ಕುಮಾರ್ ರೈ, ಕಾರ್ಯಾಧ್ಯಕ್ಷ ಸಂಜೀವ ಪೂಜಾರಿ ಗುರುಕೃಪ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಐತಪ್ಪ ಪೂಜಾರಿ ಮೊಡಂಕಾಪು, ವ್ಯವಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ದಿನೇಶ್ ಕುಮಾರ್, ಕಾನೂನು ಸಲಹೆಗಾರರಾದ ಉಮೇಶ್ ಕುಮಾರ್ ವೈ, ನರೇಂದ್ರನಾಥ ಭಂಡಾರಿ, ಪ್ರಧಾನ ಅರ್ಚಕ ಮಾದಕಟ್ಟೆ ಈಶ್ವರ ಭಟ್, ಉಪಾಧ್ಯಕ್ಷ ಆನಂದ ಕೆ, ಕೇಪು ಗೌಡ, ಆಡಳಿತ ಸಮಿತಿ ಸದಸ್ಯರಾದ ಕೃಷ್ಣ ಕುಲಾಲ್, ಚಂದ್ರಹಾಸ ಶೆಟ್ಟಿ, ಸದಾಶಿವ ಬಂಗೇರ, ಸೀತಾರಾಮ, ಬಾಲಕೃಷ್ಣ ಗೌಡ, ಜಯಕುಮಾರ್, ಪುಷ್ಪರಾಜ ಶೆಟ್ಟಿ, ನಾನಾ ಸಮಿತಿಗಳ ಪ್ರಮುಖರಾದ ಇಂದಿರೇಶ್, ಬಿ.ದೇವದಾಸ ಶೆಟ್ಟಿ, ಬೇಬಿ ಕುಂದರ್, ಪುರುಷ ಸಾಲ್ಯಾನ್, ದೇವಪ್ಪ ಕುಲಾಲ್, ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಮತ್ತಿತರರು ಉಪಸ್ಥಿತರಿದ್ದರು.

ವಿವೇಕ್ ರೈ ಕಾರ್ಯಕ್ರಮ ನಿರ್ವಹಿಸಿದರು.