
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಶಿರಮಹಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶ್ರೀ ಲಕ್ಷ್ಮೀದೇವಿ ಅಮ್ಮನವರ ನೂತನ ದೇವಾಲಯದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಹೆಚ್.ಡಿ ಕೋಟೆಯ ಶಿರಮಹಳ್ಳಿಯ ಜನರು ದೈವಭಕ್ತರು. ದೇಗುಲದಲ್ಲಿ ಸ್ಥಾಪಿಸುವ ಪ್ರತಿಮೆಯಲ್ಲಿ ದೇವರನ್ನು ಕಾಣುವುದು ನಮ್ಮ ನಂಬಿಕೆ. ಬಸವಾದಿ ಶರಣರು, ದೇವರು ಎಲ್ಲೆಡೆಯೂ, ಎಲ್ಲರಲ್ಲಿಯೂ ಇದ್ದಾನೆ ಎಂದಿದ್ದರು. ನಮ್ಮ ಪ್ರಾರ್ಥನೆಯಲ್ಲಿ ಇತರರ ಒಳಿತನ್ನೂ ಕೇಳಬೇಕು. ದೇವರೆಂಬ ನಂಬಿಕೆಯು ಜಾತಿ-ಧರ್ಮಗಳನ್ನು ಮೀರಿದಂಥದ್ದು. ಎಲ್ಲಾ ಜಾತಿ-ಧರ್ಮಗಳು ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆಂದೇ ತಿಳಿಸುತ್ತದೆ ಎಂದರು.
ಸಮಾರಂಭದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಂಸದರಾದ ಸುನೀಲ್ ಬೋಸ್, ಶಾಸಕರಾದ ಅನಿಲ್ ಚಿಕ್ಕಮಾದು, ಡಿ. ರವಿಶಂಕರ್, ಮಾಜಿ ಸಚಿವರಾದ ಎಂ.ಶಿವಣ್ಣ, ಪರಿಷತ್ ಸದಸ್ಯರಾದ ಕೆ.ಶಿವಕುಮಾರ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.