ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ದ.ಕ.ಜಿ.ಪಂ.ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆಯ ಮಾಹಿತಿ ನೀಡಿದರು.  

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಪ್ರಾತ್ಯಕ್ಷಿಕೆಯ ಮೂಲಕ ಪಕ್ಷಿಗಳಿಗೆ ನೀರು ,ಆಹಾರ ಹಾಗೂ ಕೃತಕ ಗೂಡುಗಳನ್ನು ಇಡುವ ಕ್ರಮವನ್ನು ವಿವರಿಸಿದರು.

ಈ ಸಂಧರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಆರತಿ, ಶಿಕ್ಷಕ ವೃಂದ  ಉಪಸ್ಥಿತರಿದ್ದರು.