ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಪರಿಶಿಷ್ಟ ಪಂಗಡಗಳ ಮುನ್ನಡೆ’ ಸಮಾವೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಉದ್ಘಾಟಿಸಿದರು.
ಬಳಿಕ ಮಾತನಾಡಿ ಸ್ವಾತಂತ್ರ್ಯಾ ನಂತರ ಈ ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಆರ್ಥಿಕವಾಗಿ, ಔದ್ಯೋಗಿಕವಾಗಿ, ರಾಜಕೀಯವಾಗಿ ಶಕ್ತಿ ತುಂಬಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾತ್ರ .
ಇಡೀ ಜಗತ್ತೇ ಅಯೋಧ್ಯೆಯತ್ತ ದಾವಿಸಿ ಬರುತ್ತಿರುವ ಪುಣ್ಯಭೂಮಿ ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ‘ಮಹರ್ಷಿ ವಾಲ್ಮೀಕಿ’ ಅವರ ಹೆಸರನ್ನು ಇಡುವ ಮೂಲಕ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರು ವಾಲ್ಮೀಕಿ ಮಹರ್ಷಿಗಳಿಗೆ ಹಾಗೂ ಸಮುದಾಯಕ್ಕೆ ವಿಶ್ವಮಾನ್ಯ ಗೌರವ ಕೊಟ್ಟಿದ್ದಾರೆ.
ಜನವರಿ 22 ರಂದು ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದ್ದು, ಕರ್ನಾಟಕ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕೆಂದು ರಾಮಭಕ್ತರ ಪರವಾಗಿ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕೇದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ , ಕೇಂದ್ರ ಸಚಿವರಾದ ಪ್ರಹಲ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಸಿ.ಟಿ.ರವಿ, ಬಿ. ಶ್ರೀರಾಮುಲೂ, ರಾಜ್ಯ ಉಪಾಧ್ಯಕ್ಷರಾದ ರಾಜು ಗೌಡ ಎನ್. ಎಸ್, ರಾಜ್ಯ ಪ್ರಧಾನ ಕಾರ್ಯದರ್ಶಿ ಕಾರ್ಕಳ ಸುನಿಲ್, ಎಸ್.ಟಿ. ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ಬಂಗಾರು ಹನುಮಂತು, ಮಾಜಿ ಶಾಸಕರಾದ ಎಸ್.ವಿ ರಾಮಚಂದ್ರಪ್ಪ, ಶ್ರೀ ಶಿವನಗೌಡ ನಾಯಕ್, MLC ಶ್ರೀಮತಿ ಹೇಮಲತಾ ನಾಯಕ್, ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.