ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕೋರ್ ಕಮಿಟಿ ಸಭೆ ಫೆ.2ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆಯಿತು.

ವಿಧಾನ ಪರಿಷತ್, ರಾಜ್ಯಸಭೆ ಹಾಗೂ ಲೋಕಸಭಾ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸುವ ನಿಟ್ಟಿನ ಕಾರ್ಯತಂತ್ರಗಳು ಹಾಗೂ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾದ ಶ್ರೀ ಬಿ.ಎಸ್ ಯಡಿಯೂರಪ್ಪ, ವಿರೋಧ ಪಕ್ಷ ನಾಯಕರಾದ ಶ್ರೀ ಆರ್.ಅಶೋಕ್‌, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಶ್ರೀ ಸದಾನಂದ ಗೌಡ, ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ, ಶ್ರೀ ಡಾ. ಅಶ್ವತ್‌ ನಾರಾಯಣ, ಶ್ರೀ ಬಿ.ಶ್ರೀರಾಮುಲು , ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ.ಟಿ.ರವಿ, ನಿಕಟಪೂರ್ವ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್‌ ಕುಮಾರ್ ಉಪಸ್ಥಿತರಿದ್ದರು.