ಬೆಂಗಳೂರಿನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಫೆ.22 ರಂದು ನಡೆಯಿತು. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿನ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಬಿ.ಜೆ.ಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಚುನಾವಣಾ ಉಸ್ತುವಾರಿಗಳಾದ ಶ್ರೀ Dr. Radha Mohan Das Agrawal, ವಿರೋಧ ಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಕೋಟ ಶ್ರೀನಿವಾವ ಪೂಜಾರಿ, ಪಕ್ಷದ ಉಭಯ ಸದನಗಳ ಸದಸ್ಯರು ಭಾಗವಹಿಸಿದ್ದರು.