ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ಆಯೋಜಿಸಿರುವ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.

2024 ರ ಈ ಚುನಾವಣೆ ವಿಕಸಿತ ಭಾರತ ನಿರ್ಮಿಸಿ ಭಾರತ ಗೆಲ್ಲಿಸುವ ಚುನಾವಣೆಯಾಗಿದ್ದು ಚುನಾವಣಾ ಸಮಿತಿಯು ಜವಾಬ್ದಾರಿಯುತ ಸ್ಥಾನ ನಿರ್ವಹಿಸಲಿದ್ದು, ಅತ್ಯಂತ ಕ್ರಿಯಾಶೀಲ ನಿರ್ವಹಣೆಯ ಮೂಲಕ ಯಶಸ್ವಿಯಾಗಿ ಚುನಾವಣೆ ನಿರ್ವಹಿಸುವಂತೆ ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿಗಳಾದ ಶ್ರೀ AgarwalRMD, ವಿರೋಧ ಪಕ್ಷದ ನಾಯಕರಾದ RAshoka BJP, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರಾದ karkalasunil, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ preethamgowda_j, PRajeevBJP, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ, ಶ್ರೀ ಕೇಶವ ಪ್ರಸಾದ್ ಅವರುಗಳು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮುಖಂಡರು ಹಾಗೂ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು.