ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಮಾ.8ರಂದು ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಸಂಪನ್ನಗೊಂಡಿತ್ತು. ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ನಡೆಯುವ ಸಂದರ್ಭ ದೇವಸ್ಥಾನದ ಪ್ರಾಂಗಣದಲ್ಲಿ ನೃತ್ಯ ಭಜನಾ ಕಾರ್ಯಕ್ರಮ ನಡೆಯಿತು.

ಇದೇ ಸಂದರ್ಭ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್‌ ಕಲ್ಲಡ್ಕ ಮತ್ತು ಕಮಲಾ ಪ್ರಭಾಕರ ಭಟ್‌ ಕಾರ್ಯಕ್ರಮ ಉದ್ಘಾಟಿಸಿದರು.