ಬಂಟ್ಟಾಳ: ರಾಷ್ಟ್ರೀಯ   ಹೆದ್ದಾರಿ 75ರಲ್ಲಿ ನಮ್ಮ ಬಿ.ಸಿ. ರೋಡ್‌ನಲ್ಲಿ ಸಮಾನತೆ ಮತ್ತು ಸದ್ಭಾವನೆಯ ಸಂಕೇತವಾದ ‘ಬ್ರಹ್ಮಶ್ರೀ ನಾರಾಯಣ ಗುರು ವೃತ್ತ’ ವನ್ನು ಬಂಟ್ಟಾಳ ಶಾಸಕ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು  ಅವರು ಲೋಕಾಪ೯ಣೆಗೋಳಿಸಿದರು.

ಬಳಿಕ ಮಾತನಾಡಿ  ಹಿರಿಯ ಮುತ್ಸದ್ದಿ, ಶ್ರೀ ಬಿ. ಜನಾರ್ದನ ಪೂಜಾರಿ ಅವರ ಆಶೀರ್ವಾದದೊಂದಿಗೆ ಮತ್ತು ಸಮಾಜದ ಮುಖಂಡರ ಸಮ್ಮುಖದಲ್ಲಿ ಈ ಐತಿಹಾಸಿಕ ವೃತ್ತವನ್ನು ಲೋಕಾರ್ಪಣೆಗೊಳಿಸುವ ಸೌಭಾಗ್ಯ ನನ್ನದಾಯಿತು ಎಂದು ಹೇಳಿದರು.

ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ, ಗುರುಪೂಜೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

“ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ತತ್ತ್ವದ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆ ತಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ನಮ್ಮ ಸಾಗುವ ಹಾದಿಗೆ ಮಾರ್ಗದರ್ಶಿ ಹಾಗೂ ಸದಾ ಸ್ಪೂರ್ತಿಯಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.