ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಭಾಶ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕಂಚಿನ ಮೂರ್ತಿ ಮತ್ತು ಮೇಲು ಸೇತುವೆಯನ್ನು ಸಿ.ಎಂ.ಸಿದ್ಧರಾಮಯ್ಯ ಅನಾವರಣಗೊಳಿಸಿದರು.

ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ರಾಮಲಿಂಗಾರೆಡ್ಡಿ, ಹೆಚ್.ಸಿ.ಮಹದೇವಪ್ಪ, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.