ಆಗ್ನೇಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಶ್ರೀ ವೈ.ಎ.ನಾರಾಯಣಸ್ವಾಮಿ, ಬೆಂಗಳೂರು ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಅ.ದೇವೇಗೌಡ ಅವರು ನಾಮಪತ್ರ ಸಲ್ಲಿಸಿದರು.

ಪದವೀಧರರು, ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸುಧಾರಣೆಯ ಪರ್ವ ಆರಂಭಿಸಿದ್ದು ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಸರ್ಕಾರ ಹಾಗೂ ಹಿಂದಿನ ನಮ್ಮ ಬಿಜೆಪಿ ಸರ್ಕಾರ ಮಾತ್ರ, ಶಿಕ್ಷಣ ಕ್ಷೇತ್ರದ ಮತ್ತಷ್ಟು ಅಭಿವೃದ್ಧಿ ಹಾಗೂ ಶಿಕ್ಷಕರ ಆಶೋತ್ತರಗಳಿಗೆ ಸ್ಪಂದಿಸಲು ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿಗಳಿಗೆ ಪ್ರಬುದ್ಧ ಮತದಾರರು ಸಂಪೂರ್ಣ ಆಶೀರ್ವಾದ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ BSBommai, ವಿಪಕ್ಷ ನಾಯಕರಾದ RAshokaBJP, ಮಾಜಿ ಉಪಮುಖ್ಯಮಂತ್ರಿಗಳಾದ GovindKarjol, drashwathcn, ರಾಜ್ಯಸಭಾ ಸದಸ್ಯರಾದ ಶ್ರೀ ಲೆಹರ್ ಸಿಂಗ್, ಸಂಸದರಾದ PCMohanMP, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಶ್ರೀ ಬಿ.ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಹನುಮಂತ ನಿರಾಣಿ, ಶ್ರೀ ಎಂ.ಚಿದಾನಂದಗೌಡ, ಮಾಜಿ ಶಾಸಕರಾದ ಎಂ.ಡಿ.ಲಕ್ಷ್ಮಿನಾರಾಯಣ್, ಶ್ರೀ ಎಂ.ಕೃಷ್ಣರೆಡ್ಡಿ, ಶ್ರೀ ಅರುಣ್ ಶಹಾಪುರ, ರಾಜ್ಯ ಕಾರ್ಯದರ್ಶಿ ಶ್ರೀ ತಮ್ಮೇಶ್ ಗೌಡ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಪದವೀಧರ ಹಾಗೂ ಶಿಕ್ಷಕ ಮತದಾರರು ಭಾಗವಹಿಸಿದ್ದರು.