ಕೇಂದ್ರ ಸಚಿವರಾದ ಭೂಪೇಂದ್ರ ಜಾದವ್ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಿ ವಿವಿಧ ಹಿಂದುಳಿದ ಸಮುದಾಯಗಳ ಪ್ರಮುಖರೊಂದಿಗೆ ಸಂವಾದ ನಡೆಸಿದರು.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಸೇರ್ಪಡೆ ಮಾಡಿರುವ ಐತಿಹಾಸಿಕ ನಿರ್ಧಾರವನ್ನು ಈ ಸಂದರ್ಭದಲ್ಲಿ ಸ್ವಾಗತಿಸಿ ಅಭಿನಂದಿಸಲಾಯಿತು.
ಕೇಂದ್ರ ಸರ್ಕಾರ ನಡೆಸುವ ಜಾತಿಗಣತಿಯಲ್ಲಿ ಹಿಂದುಳಿದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ಇನ್ನಿತರ ಮಾಹಿತಿಯ ಸಹಿತ ಸಮೀಕ್ಷೆ ನಡೆಯಲಿದ್ದು, ಈಗಾಗಲೇ ರಾಜ್ಯದ ಕಾಂಗ್ರೆಸ್ ಸರ್ಕಾರ ಕಾಂತರಾಜು ವರದಿಯ ಹೆಸರಿನಲ್ಲಿ ಜನರ ₹165 ಕೋಟಿ ರೂ ಗಳನ್ನು ನಿರರ್ಥಕಗೊಂಡಿದ್ದು ರಾಜ್ಯ ಸರ್ಕಾರ ಮತ್ತೆ ಜಾತಿ ಸಮೀಕ್ಷೆ ಕೈಗೊಳ್ಳುವ ಅವಶ್ಯಕತೆ ಇಲ್ಲ ಎಂಬ ಒಕ್ಕೊರಲಿನ ಅಭಿಪ್ರಾಯ ವಿಚಾರ ಸಂಕಿರಣದಲ್ಲಿ ವ್ಯಕ್ತವಾಯಿತು.
ಇದನ್ನೂ ಓದಿ : ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ
ಈ ಸಂದರ್ಭದಲ್ಲಿ ಬಿ.ಜೆ.ಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಡಾ. ಕೆ. ಭಕ್ತವತ್ಸಲ, ಹಿಂದುಳಿದವರ ಸಮುದಾಯಗಳ ಪರ ಚಿಂತಕರು ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯರಾದ ಶ್ರೀ ಕೆ. ಮುಕುಡಪ್ಪ ಅವರುಗಳು, ಪಕ್ಷದ ಎಲ್ಲಾ ಪ್ರಮುಖರು, ಮಾಜಿ ಸಚಿವರು, ಸಂಸದರು, ಶಾಸಕರು, ಮಾಜಿ ಶಾಸಕರು, ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.