ಪೊಳಲಿ: ನವರಾತ್ರಿ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ, ಅಕ್ಟೋಬರ್ 14ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಸೇವಾರ್ಥವಾಗಿ ಚಂಡಿಕಾ ಯಾಗ ನೆರವೇರಿತು. ಇದನ್ನೂ ಓದಿ :ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರಿಂದ ಚಂಡಿಕಾ ಯಾಗ
ಸಂಸದ ಕ್ಯಾ.ಬ್ರಿಜೇಶ್ ಚೌಟ,ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ,ಪ್ರಮುಖರಾದ ಉದಯ ಕುಮಾರ್ ರಾವ್, ಗೋವಿಂದ ಪ್ರಭು,ಬಿಜೆಪಿ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಪ್ರ. ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಶಿವಪ್ರಸಾದ್ ಕರೋಪಾಡಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಯಾಗದ ಬಳಿಕ ಪೂರ್ಣಾಹುತಿ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12 ಗಂಟೆಗೆ ಶ್ರೀ ರಾಜರಾಜೇಶ್ವರಿ ದೇವಿಗೆ ಮಹಾಪೂಜೆ ನೆರವೇರಿತು. ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಭಾಗವಹಿಸಿ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
