ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಕ್ಕೆ ಜೂ. 3 ರಂದು ನಡೆಯಲಿರುವ ಚುನಾವಣೆಯ ಪ್ರಯುಕ್ತ ಚೆನ್ನೈ ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪ್ರಮುಖರ ಸಭೆ ವಾಮದಪದವು ಶ್ರೀ ಗಣೇಶ ಮಂದಿರದಲ್ಲಿ ನಡೆಯಿತು.
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ಡೊಂಬಯ ಅರಳ ಮತ್ತು ಕಾವಳಪಡೂರು ಮಹಾಶಕ್ತಿ ಕೇಂದ್ರದ ಚುನಾವಣಾ ಸಹಸಂಚಾಲಕ್ ಪ್ರೊಫೆಸರ್ ನಾರಾಯಣ ಭಂಡಾರಿ ಚುನಾವಣಾ ಪ್ರಕ್ರಿಯೆ ಮತ್ತು ಮತದಾರರ ಸಂಪರ್ಕ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.
ಈ ಸಭೆಯಲ್ಲಿ ಮಂಡಲ ಬಿಜೆಪಿ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ, ರಾಜ್ಯ ನಾಯಕಿ ಶ್ರೀಮತಿ ಸುಲೋಚನಾ ಜಿ.ಕೆ.ಭಟ್, ಮಂಡಲ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ದಂಬೆದಾರ್, ಹಾಗೂ ಚೆನ್ನೈತ್ತೋಡಿ, ಕೊಡಂಬೆಟ್ಟು, ಅಜ್ಜಿಬೆಟ್ಟು, ಪಿಲಿ ಮೊಗರು ಗ್ರಾಮಗಳ ಬಿಜೆಪಿ ಪ್ರಮುಖರು ಭಾಗವಹಿಸಿದರು.