ಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯದಲ್ಲಿ ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಆಯೋಜಿಸಿದ್ದ ಸಮಾರಂಭದಲ್ಲಿ ಕೃಷ್ಣೆಯ ಒಡಲಿಗೆ ಗಂಗಾಪೂಜೆ ನೆರವೇರಿಸಿ, ಬಳಿಕ ಬಾಗಿನ ಅರ್ಪಿಸಿ, ಲೋಕಕಲ್ಯಾಣಕ್ಕಾಗಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಪ್ರಾರ್ಥಿಸಿದರು.
ನಾಡಿನಾದ್ಯಂತ ಉತ್ತಮ ಮಳೆಯಾಗಿ ಜಲಾಶಯಗಳೆಲ್ಲಾ ಮೈದುಂಬಿ ನಿಂತಿವೆ. ಇದೇ ರೀತಿ ಪ್ರತಿ ವರ್ಷ ಪ್ರಕೃತಿ ಮಾತೆ ನಮ್ಮೆಲ್ಲರನ್ನು ಪೊರೆಯಲಿ ಎಂದು ಆಶಿಸಿದರು.

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ಇಡೀ ಪ್ರಕ್ರಿಯೆ ವಿಳಂಬವಾಗುತ್ತದೆ.
ಇದನ್ನೂ ಓದಿ : ಗಾಂಧಿ ಭಾರತ ಶತಮಾನೋತ್ಸವʼ ಸಮಿತಿ ಸಭೆ
ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿದ್ದೆ. ಅಲ್ಲಿ ಎಲ್ಲರೂ ಒಪ್ಪಿಗೆ ಪತ್ರ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು.
ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ.
ಬಾಗಲಕೋಟೆಯ ಮಲಪ್ರಭಾ ನದಿ ಹಾಗೂ ವಿಜಯಪುರ ಜಿಲ್ಲೆಯ ಡೋಣಿ ನದಿಯಲ್ಲಿ ಪ್ರವಾಹ ತಲೆದೋರಿ ರೈತರಿಗೆ ಹಾನಿಯುಂಟಾಗುತ್ತಿದ್ದು, ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸರ್ಕಾರ ಬದ್ಧವಾಗಿದೆ.
ಯುಕೆಪಿ ಹಂತ 3ಕ್ಕೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಆದಷ್ಟು ಶೀಘ್ರ ಹೊರಡಿಸಲು ಕೇಂದ್ರದ ಮೇಲೆ ಹಲವು ಬಾರಿ ಒತ್ತಡ ಹೇರಲಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.