ಬಂಟ್ವಾಳ ತಾಲೂಕಿನ 51 ಗ್ರಾಮ ಪಂಚಾಯತ್‌ಗಳ ಸಾರ್ವಜನಿಕ ಸ್ಥಳಗಳಲ್ಲಿ ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಅವರ ಸೂಚನೆಯಂತೆ ತ್ಯಾಜ್ಯ ರಾಶಿ ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಯಿತು.
ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿದ್ದ ತ್ಯಾಜ್ಯ ತೆರವುಗೊಳಿಸಲಾಯಿತು. ಒಣ ತ್ಯಾಜ್ಯಗಳನ್ನು ಸ್ವಚ್ಛ ಸಂಕೀರ್ಣಕ್ಕೆ ಸಾಗಿಸಲಾಯಿತು. ಗ್ರಾ.ಪಂ. ವ್ಯಾಪ್ತಿಯ ಸಾರ್ವಜನಿಕ ಪ್ರದೇಶ, ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯದಂತೆ, ತ್ಯಾಜ್ಯವನ್ನು ಸುಡದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ವಿಶೇಷ ಸ್ವಚ್ಛ ಸಪ್ತಾಹ ನಡೆಸಲಾಯಿತು.