ಅಟ್ಲಾಂಟಿಕ್ ಮಹಾಸಾಗರವನ್ನು ಸತತ 52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡುತ್ತಾ ದಾಟಿ ದಾಖಲೆಗೈದ ನಮ್ಮ ಬೆಂಗಳೂರು ಮೂಲದ ಅನನ್ಯ ಪ್ರಸಾದ್ ಅವರ ಸಾಧನೆ ಇಡೀ ದೇಶ ಹೆಮ್ಮೆಪಡುವಂತದ್ದು ಎಂದು ಸಿ.ಎಂ.ಸಿದ್ಧರಾಮಯ್ಯ ಹೇಳಿದರು. ಈ ಸಾಧನೆಯ ಶಿಖರವನ್ನೇರಿದ ಯುವತಿ ಕನ್ನಡದ ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪ ಅವರ ಮೊಮ್ಮಗಳು ಎನ್ನುವುದು ಇನ್ನಷ್ಟು ಖುಷಿಯ ವಿಷಯ ಎಂದರು.
ಅನಾಥ ಮಕ್ಕಳಿಗೆ ಶಿಕ್ಷಣ ನೀಡುವ ಚಾಮರಾಜನಗರ – ರಾಮಸಮುದ್ರದ ದೀನಬಂಧು ಶಾಲೆಯ ಮಕ್ಕಳ ಭವಿಷ್ಯಕ್ಕಾಗಿ ಇಂಥದ್ದೊಂದು ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಅನನ್ಯ ಪ್ರಸಾದ್‌ಗೆ ಅಭಿನಂದನೆಗಳು. ಇಂತಹ ನಿಸ್ವಾರ್ಥ ಆಲೋಚನೆಗಳು ನಿಮ್ಮನ್ನು ಜೀವನದಲ್ಲಿ ಮತ್ತಷ್ಟು ಎತ್ತರೆತ್ತರಕ್ಕೆ ಕೊಂಡೊಯ್ಯಲಿ ಎಂದು ಹಾರೈಸಿದರು.