ಅವರು ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ “ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಶೂದ್ರ ವರ್ಗದ ಜನ ಹಿಂದುಳಿಯಲು ಅವರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೇ ಪ್ರಮುಖ ಕಾರಣ. ಶೂದ್ರರು, ದಲಿತರು ಮಾತ್ರ ಶಿಕ್ಷಣ ಪಡೆಯುವಂತಿರಲಿಲ್ಲ. ಅಂಬೇಡ್ಕರ್ ಅವರ ಜೀವಮಾನದ ಹೋರಾಟವೇ ಈ ಅಸಮಾನತೆಯನ್ನು ಅಳಿಸುವುದಾಗಿತ್ತು. ಇದಕ್ಕೆ ಶಿಕ್ಷಣವೇ ಪ್ರಮುಖ ಅಸ್ತ್ರ ಎಂದು ಅಂಬೇಡ್ಕರ್ ಮನಗಂಡಿದ್ದರು.