ಬೆಂಗಳೂರಿನ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಮುಂದೆ ಬಂದಿದ್ದು, ಈ ಕುರಿತು ಸವಿವರವಾದ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೂಚಿಸಿದರು.
ಯೋಜನೆಯ ರೂಪುರೇಷೆಗಳ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು, ಜಾಗವು ನಗರದ ಕೇಂದ್ರ ಭಾಗದಲ್ಲಿರುವುದರಿಂದ ಇದರ ಸದುಪಯೋಗ ಮಾಡಿಕೊಳ್ಳುವ ಕುರಿತು ಸವಿವರ ಪ್ರಸ್ತಾವನೆ ಸಲ್ಲಿಸಬೇಕು.
ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತು ಸಹ ಮಾಹಿತಿ ಒದಗಿಸಬೇಕು ಎಂದರು.