ರೈತ ಸಂಘಟನೆಗಳ ಮುಖಂಡರು ಮತ್ತು ಕೃಷಿ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಅಹವಾಲು ಆಲಿಸಿ, ಬಜೆಟ್‌ನಲ್ಲಿ ಸಾಧ್ಯವಾಗುವ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದರು.
ಬಳಿಕ ಮಾತನಾಡಿ ನಮ್ಮ ಸರ್ಕಾರದ ಆದ್ಯತೆಯ ಕ್ಷೇತ್ರಗಳಲ್ಲಿ ಕೃಷಿ ಕೂಡ ಒಂದಾಗಿದ್ದು, ಕೃಷಿ ಕಾರ್ಯದಲ್ಲಿ ತೊಡಗಿರುವ ನಾಡಿನ ರೈತಾಪಿ ವರ್ಗದ ಹಿತಕಾಯುವ ನಮ್ಮ ಬದ್ಧತೆಯಲ್ಲಿ ಯಾವ ರಾಜಿಯೂ ಇಲ್ಲ ಎಂದರು.  ಇದನ್ನೂ ಓದಿ :  ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ – ಗಂಡನ ಪ್ರಣಯದಾಟ ಬಿಚ್ಚಿಟ್ಟ ಪತ್ನಿ
ಈ ಸಂರ್ಭದಲ್ಲಿ  ಸಚಿವರಾದ ಚಲುವರಾಯಸ್ವಾಮಿ, ವೆಂಕಟೇಶ್, ನೀತಿ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.